ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ ಎಸ್‌ಡಿಎಂ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಶನಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿದ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಮತ್ತು ಅಂಚೆ-ಕುಂಚ ವಿಜೇತರ ಪುರಸ್ಕಾರ ಸಮಾರಂಭದಲ್ಲಿ ಮಂಗಳೂರು ಸನಾತನ ನಾಟ್ಯಾಲಯದವರಿಂದ ಗಾಯನ- ನೃತ್ಯ ಹಾಗೂ ರಾಷ್ಟ್ರೀಯ ಕಲಾವಿದ ಶಾಂತಯ್ಯ ಪರಡಿಮಠ ದಾವಣಗೆರೆ ಅವರಿಂದ ಕುಂಚ ಕಾರ್ಯಕ್ರಮ ಜರುಗಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಮಠದ ಶ್ರೀ ನಿರಂಜನ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮೀಜಿ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ, ಡಿ. ಹರ್ಷೇಂದ್ರ ಕುಮಾರ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಕೊಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.