ಸನಾತನ ನಾಟ್ಯಾಲಯದ ಆಶ್ರಯದಲ್ಲಿ ಸನಾತನ ಜ್ಞಾನಾಮೃತ ಮತ್ತು ಭರತ ನಾಟ್ಯ ಕಾರ್ಯಕ್ರಮವು ನಗರದ ಪುರಭವನದಲ್ಲಿ ಅಕ್ಟೋಬರ್ 21 ರಂದು ನಡೆಯಿತು.
ಭರತನಾಟ್ಯದೊಂದಿಗೆ 2017 ನೇ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ಪಿ. ರವೀಂದ್ರ ಪುತ್ತೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಲಕ್ಷ್ಮಣ ದೇವಾಡಿಗ, ಸಂದೇಶ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ನೃತ್ಯಗುರು ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ನಾಗರಾಜ್, ನಿರ್ದೇಶಕರಾದ ಚಂದ್ರಶೇಖರ್ ಕೆ. ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಳಿಕ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.