ಸನಾತನ ನಾಟ್ಯಾಲಯದ ಆಶ್ರಯದಲ್ಲಿ ದಿನಾಂಕ 9-6-2018 ರಂದು ನಗರದ ಪುರಭವನದಲ್ಲಿ ದಿ|| ಸ್ವರುಣ್ ರಾಜ್ ಅವರ ಸ್ಮರಣಾರ್ಥ 5ನೇ ವರ್ಷದ ಸ್ವರುಣ್ ಸ್ಮರಣಾಂಜಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ, ಸುರೇಶ್ ರಾಜ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಚಂದ್ರಶೇಖರ್ ಕೆ. ಶೆಟ್ಟಿ, ವಿದುಷಿ ಶಾರದಾಮಣಿ ಶೇಖರ್, ವಿದುಷಿ ಶ್ರೀಲತಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ವಿದುಷಿ ಶಾರದಾಮಣಿ ಶೇಖರ್ ಅವರ ಪುತ್ರಿ ಶುಭಾಮಣಿ ಚಂದ್ರಶೇಖರ್ ಮತ್ತು ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ಜರಗಿತು.