ಸನಾತನ ನಾಟ್ಯಾಲಯದ ವತಿಯಿಂದ ಜನವರಿ 17 ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸನಾತನ ನೃತ್ಯೋತ್ಸವ ನಡೆಯಿತು. ದ. ಕ. ಜಿಲ್ಲಾ ಒಕ್ಕೂಟ ಸೌಹಾರ್ದ ಸಹಕಾರಿ ಅಧ್ಯಕ್ಷ ಎ. ಸುರೇಶ್ ರೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಕಾಸ ಸಮೂಹ ಸಂಸ್ಥೆಗಳ ಡೀನ್ ಮಂಜುಳಾ ಅನಿಲ್ ರಾವ್, ಮನಪಾ ಸದಸ್ಯರಾದ ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ನೃತ್ಯ ಪ್ರದರ್ಶನ ನಡೆಯಿತು.