ಮಂಗಳೂರಿನ ಸನಾತನ ನಾಟ್ಯಾಲಯದಲ್ಲಿ ಜುಲೈ 8 ರಂದು ಭಗವದ್ಗೀತಾ ಕಂಠಪಾಠ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸನಾತನ ನಾಟ್ಯಾಲಯದ ಹಿರಿಯ ಪಾಲಕರಾದ ಶ್ರೀಮತಿ ಪದ್ಮಾವತಿ ಜೆ ಶೇಖ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾರದಾ ಮಹಿಳಾ ವೃಂದದ ಅಧ್ಯಕ್ಷೆ ಸತ್ಯವತಿ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಸದಸ್ಯೆ ನೃತ್ಯ ಗುರು ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಅವರು ಉಪಸ್ಥಿತರಿದ್ದರು.
ರಾಮಕೃಷ್ಣ ಆಶ್ರಮದ ಹಳೆ ವಿದ್ಯಾರ್ಥಿ ಶ್ರೀಯುತ ಸತ್ಯನಾರಾಯಣ್ ಇವರು ವಿದ್ಯಾರ್ಥಿಗಳಿಗೆ ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು.
ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿ ಇವರು ಮಾತನಾಡುತ್ತಾ, ಕಳೆದ ಎಂಟು ವರ್ಷಗಳಿಂದ ಸನಾತನ ನಾಟ್ಯಾಲಯದ ನೃತ್ಯ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಹೇಳಿಕೊಡಲಾಗುತ್ತಿತ್ತು. ಈ ವರ್ಷ 8ನೇ ಅಧ್ಯಾಯವನ್ನು ಹೇಳಿಕೊಡಲಾಗುವುದು, ಆ ಬಳಿಕ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣ ಕಾರ್ಯಕ್ರಮವನ್ನು ನಡೆಸಲಾಗುವುದೆಂದು ತಿಳಿಸಿದರು.
ವಿದುಷಿ ಶ್ರೀಲತಾ ನಾಗರಾಜ್ ಕಾರ್ಯಕ್ರಮವನ್ನು ನಿರೂಪಿಸಿದರು.