ಫೆಬ್ರವರಿ 1 , 2023 ರಂದು ಕರ್ನಾಟಕದ ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋತ್ ಅವರು ಮಂಗಳೂರಿನಲ್ಲಿರುವ Indian coast gaurd ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಶಿಷ್ಯ ವೃಂದದವರು ವೈವಿಧ್ಯಮಯ ಶಾಸ್ತ್ರೀಯ ಜಾನಪದ ಮತ್ತು ದೇಶಭಕ್ತಿ ಗೀತೆಯ ನೃತ್ಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು.