ಅಕ್ಟೋಬರ್ 18ರಂದು ಜಿಲ್ಲಾಡಳಿತ, ಧಾರ್ಮಿಕ ದತ್ತಿ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ದೇವಿ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈವಿಧ್ಯ ಪ್ರಸ್ತುತ ಪಡಿಸಲಾಯಿತು. ಈ ಸಂದರ್ಭ ಹಾಸನದ ಜಿಲ್ಲಾಧಿಕಾರಿ ಶ್ರೀಮತಿ ರೋಹಿಣಿ ಸಿಂಧೂರಿ ದಾಸರಿ ಅವರು ಉಪಸ್ಥಿತರಿದ್ದರು.