ನೃತ್ಯ ಗುರು ಶಾರದಾಮಣಿ ಶೇಖರ್ ಅವರಿಗೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2017-18 ನೇ ಸಾಲಿನ ‘ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ’ ಪ್ರದಾನ ಮಾಡಿತು. ನವೆಂಬರ್ 26 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 15 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶಾರದಾಮಣಿ ಶೇಖರ್ ಅವರಿಗೆ ನೃತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಕಲಾಶ್ರೀ ಗೌರವ ಪ್ರಶಸ್ತಿಯು ದೊರಕಿದ್ದು, ಈ ಪ್ರಶಸ್ತಿಯು 50 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.