ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಅವಭೃತೋತ್ಸವದ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶನ ನೀಡಿದರು.
ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಶುಕ್ರವಾರ ಅವಭೃತೋತ್ಸವದ ಸಂದರ್ಭದಲ್ಲಿ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶನ ನೀಡಿದರು.
Students appearing for Bharathanatyam examination 2020 conducted by Karnataka state secondary education examination board.
Presented Punyabhoomi Bharatha at Kudroli Gokarnatheshwara Temple on the occasion of Navaratri Utsava- on 23rd October 2020.
ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಶಿಷ್ಯ ವೃಂದದವರಿಂದ ನವರಾತ್ರಿಯ ಕಾರ್ಯಕ್ರಮಗಳು.
ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಆಶ್ರಯದಲ್ಲಿ ತುಳು ಭವನದ ಸಿರಿ ಚಾವಡಿಯಲ್ಲಿ ಸಂಗೀತ ನೃತ್ಯೋತ್ಸವ ಕಾರ್ಯಕ್ರಮವು ನಡೆಯಿತು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ಸಂಸ್ಕಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ, ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಕೆ. ಚಂದ್ರಶೇಖರ ನಾವಡ, ಅಕಾಡೆಮಿ ಸದಸ್ಯೆ ನೃತ್ಯಗುರು ಶಾರದಾ ಮಣಿ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಸನಾತನ ನಾಟ್ಯಾಲಯದಲ್ಲಿ ಎಸಿಡಿಎಂಕೆ ಮತ್ತು ಅನನ್ಯ ಸಂಸ್ಥೆಯ ವತಿಯಿಂದ ಫೇಸ್‌ಬುಕ್ ಲೈವ್‌ನಲ್ಲಿ ಏರ್ಪಡಿಸಲಾಗಿದ್ದ ಭರತನಾಟ್ಯ ಕಾರ್ಯಕ್ರಮದಲ್ಲಿ ವಿದ್ವಾನ್ ರಾಧಿಕಾ ಶೆಟ್ಟಿ ಅವರು ಭರತನಾಟ್ಯ ಪ್ರದರ್ಶಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಬೆಂಗಳೂರು ಇವರ ಸಹಯೋಗದಲ್ಲಿ ದ. ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಬೆಂಗಳೂರು ಇವರ ನೇತೃತ್ವದಲ್ಲಿ 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನೃತ್ಯರೂಪಕ ಕಾರ್ಯಕ್ರಮದಲ್ಲಿ ನಡೆಯಿತು.